Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:22 - ಕನ್ನಡ ಸಮಕಾಲಿಕ ಅನುವಾದ

22 ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವ್ ಲೊಕಾಕ್ನಿ ಜೆಜು ಕ್ರಿಸ್ತಾ ವರ್‍ತಿ ತೆಂಕಾ ಹೊತ್ತ್ಯಾ ವಿಶ್ವಾಸಾಚ್ಯಾ ವೈನಾ ತೆನಿ ಭಕ್ತಿವಂತ್ ಮನುನ್ ಠರ್‍ವುತಾ. ದೆವಾನ್ ಹೆ ಕ್ರಿಸ್ತಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಕರ್‍ಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್, ಥೈ ಕಸ್ಲೊಬಿ ಅಂತರ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:22
30 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು