Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:27 - ಕನ್ನಡ ಸಮಕಾಲಿಕ ಅನುವಾದ

27 ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ರ್‍ಹಾತಾನಾ, ಅಮಿ ಅಮ್ಚ್ಯಾಚ್ ವಿಶಯಾತ್ ಮೊಟೆಪಾನ್ ಬೊಲುನ್ ಘೆವ್ಕ್ ಅವ್ಕಾಸ್ ಖೈ ಹಾಯ್? ಕಾಯ್ಬಿ ನಾ! ಅಶೆ ಕರುಕ್ ಕಾರನ್ ತರ್ ಖೈ ಹಾಯ್? ಅಮಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲೆ ಕಾಯ್? ನ್ಹಯ್, ಜೆ ಅಮಿ ವಿಶ್ವಾಸ್ ಕರ್ತಾಂವ್ ತೆ ಮೊಟೆಪಾನ್ ಬೊಲುಕ್ ಅವಕಾಸ್ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:27
26 ತಿಳಿವುಗಳ ಹೋಲಿಕೆ  

ನಿಯಮದ ಬಗ್ಗೆ ಹೆಚ್ಚಳ ಪಡುವ ನೀನು ನಿಯಮವನ್ನು ಮೀರಿ ನಡೆದು ದೇವರನ್ನು ಅವಮಾನ ಪಡಿಸುತ್ತೀಯೋ?


ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಆದರೆ, ನೀನು ಯೆಹೂದ್ಯನೆನಿಸಿಕೊಂಡವನೂ ನಿಯಮದಲ್ಲಿ ಭರವಸೆಯಿಟ್ಟವನೂ ದೇವರಿಗೆ ಸೇರಿದವನೂ


ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.


ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.


ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.


ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.


ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.


ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು