Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:28 - ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧರ್ಮಪ್ರಮಾಣಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬದಾಗಿ ನಿಶ್ಚಯ ಮಾಡಿಕೊಂಡಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಆಕ್ರಿಕ್ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಅಶೆ ಖಾಯ್ದ್ಯಾತ್ನಿ ಕಾಯ್ ಹಾಯ್ ತೆ ಸಗ್ಳೆ ಪಾಳಲ್ಲ್ಯಾ ವೈನಾ ನ್ಹಯ್, ಖಾಲಿ ವಿಶ್ವಾಸಾಚ್ಯಾ ವೈನಾ ಎವ್ಡೆಚ್ ಎಕ್ ಮಾನುಸ್ ನಿತಿವಂತ್ ಮನುನ್ ಠರ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:28
20 ತಿಳಿವುಗಳ ಹೋಲಿಕೆ  

ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ಹೀಗೆ ಮನುಷ್ಯನು ನಂಬಿಕೆಯಿಂದ ಮಾತ್ರವಲ್ಲ ಕ್ರಿಯೆಗಳಿಂದಲೂ ನೀತಿವಂತನೆಂದು ನಿರ್ಣಯ ಹೊಂದುತ್ತಾನೆ ಎಂದು ನೀವು ನೋಡುತ್ತೀರಿ.


ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು.


ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು.


ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು