Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:30 - ಕನ್ನಡ ಸಮಕಾಲಿಕ ಅನುವಾದ

30 ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ದೆವ್ ಎಕ್ಲೊಚ್, ಅನಿ ತೊ ಸ್ವತಾ ಜುದೆವ್ ಲೊಕಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ತೆನಿ ನಿತಿವಂತ್ ಮನುನ್ ಠರ್ವುತಾ, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ಖರ್ಯ್ಯಾ ವಾಟೆನ್ ಚಲಲ್ಲಿ ಲೊಕಾ ಮನುನ್ ಠರ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:30
18 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.


ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ.


ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ?


ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು