Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:8 - ಕನ್ನಡ ಸಮಕಾಲಿಕ ಅನುವಾದ

8 “ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ರ್‍ಹಾತಾನಾ ಬರೆಪಾನ್ ಯೆವ್‍ಸಾಟ್ನಿ ಅಮಿ ಬುರ್ಶೆ ಕಶ್ಯಾಕ್ ಕರುಚೆ ನ್ಹಯ್? ಹಿ ಸಗ್ಳಿ ವಿಶಯಾ ಸಾಂಗುನ್ ಉಲ್ಲಿ ಲೊಕಾ ಮಾಕಾ ತಿರಸ್ಕಾರ್ ಕರುನ್ ಅವ್ಮಾನ್ ಕರುಲ್ಯಾತ್! ಅಶೆ ಕರ್‍ತಲ್ಯಾ ತೆಂಕಾ ತೆನಿ ಕರಲ್ಲ್ಯಾಕ್ ಶಿಕ್ಷಾ ದಿತಲೆ ಸಮಾಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:8
10 ತಿಳಿವುಗಳ ಹೋಲಿಕೆ  

ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ?


ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!


ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,” ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ಆದ್ದರಿಂದ ಸೈತಾನನ ಸೇವಕರೂ ನೀತಿಯ ಸೇವಕರಂತೆ ಕಾಣಿಸಿಕೊಳ್ಳುವುದಕ್ಕೆ ತಮ್ಮನ್ನು ಮಾರ್ಪಡಿಸಿಕೊಳ್ಳುವುದು ಆಶ್ಚರ್ಯವೇನೂ ಅಲ್ಲ. ಅವರ ಕೃತ್ಯಗಳಿಗೆ ತಕ್ಕಂತೆ ಅವರಿಗೆ ಅಂತ್ಯವೂ ಇರುವುದು.


ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು