ರೋಮಾಪುರದವರಿಗೆ 4:13 - ಕನ್ನಡ ಸಮಕಾಲಿಕ ಅನುವಾದ13 ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ದೆವಾನ್ ಅಬ್ರಾಹಾಮಾಕ್ ಅನಿ ತೆಚ್ಯಾ ಘರಾನ್ಯಾಕ್ನಿಚ್ಯಾ ಹ್ಯೊ ಸಗ್ಳೊ ಜಗ್ ತುಕಾ ಸಮಂದ್ ಪಡಲ್ಲೊ ಹಾಯ್ ಮನುನ್ ಗೊಸ್ಟ್ ದಿಲ್ಯಾನ್, ತನ್ನಾ ದೆವಾನ್ ಅಬ್ರಾಹಾಮಾನ್ ಖಾಯ್ದೆ ಪಾಳಲ್ಲ್ಯಾನ್ ಮನುನ್ ತಸೆ ಕರುಕ್ ನಾ; ತೆನಿ ವಿಶ್ವಾಸ್ ಕರ್‍ಲ್ಯಾನ್ ಅನಿ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಘೆಟಲ್ಲ್ಯಾನ್ ಮನುನ್ ತೆನಿ ಅಶೆ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |