Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಎಕ್ಲೊ ಅಪ್ನಾಚ್ಯಾ ಸ್ವತಾಚ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ರಾಯ್‍ನಸ್ತಾನಾ, ಬುರ್ಶ್ಯಾ ಲೊಕಾಕ್ನಿ ಚುಕಿದಾರ್ ನ್ಹಯ್ ಮನುನ್ ಎಚುನ್ ಕಾಡ್ತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಕರುನ್ ಘೆವ್ನ್ ರ್‍ಹಾತಾ ಹೊಲ್ಯಾರ್, ಹ್ಯಾ ತೆಚ್ಯಾ ವಿಶ್ವಾಸಾಚ್ಯಾ ವೈನಾಚ್ ದೆವ್ ತೆಕಾ ಅಪ್ನಾಚ್ಯಾ ನದ್ರೆತ್ ನಿತಿವಂತ್ ಮಾನುಸ್ ಮನುನ್ ಠರ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:5
24 ತಿಳಿವುಗಳ ಹೋಲಿಕೆ  

ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.


ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.


ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.


ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು