ರೋಮಾಪುರದವರಿಗೆ 5:1 - ಕನ್ನಡ ಸಮಕಾಲಿಕ ಅನುವಾದ1 ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅತ್ತಾ ಅಮ್ಕಾ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಅಮ್ಕಾ ಶಾಂತಿ ರ್‍ಹಾತಾ. ಅಧ್ಯಾಯವನ್ನು ನೋಡಿ |
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.