Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:10 - ಕನ್ನಡ ಸಮಕಾಲಿಕ ಅನುವಾದ

10 ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ದೆವಾಚಿ ದುಶ್ಮನಾ ಹೊವ್ನ್ ಹೊತ್ತಾಂವ್, ಖರೆ ಅಪ್ನಾಚ್ಯಾ ಲೆಕಾಚ್ಯಾ ಮರ್ನಾನ್ ದೆವಾನ್ ಅಮ್ಕಾ ಅಪ್ನಾಚಿ ದೊಸ್ತಾ ಕರುನ್ ಘೆಟ್ಲ್ಯಾನ್. ಅತ್ತಾ ತೆಚಿ ದೊಸ್ತಾ ಹೊವ್ನ್ ಅಸಲ್ಲೆ ಅಮಿ, ಕ್ರಿಸ್ತಾಚ್ಯಾ ಜಿವಾಚ್ಯಾ ವೈನಾ ಅನಿ ಉಲ್ಲೆ ವಿಶೆಸ್ ರಿತಿಚಿ ಸುಟ್ಕಾ ಖಮ್ವುನ್ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:10
29 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.


ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು.


ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು.


ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು