Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ಮಾನ್ಸಾಚ್ಯಾ ವೈನಾ ಜಗಾತ್ ಪಾಪ್ ಯೆಲೊ, ಅನಿ ತೆಚ್ಯಾ ಪಾಪಾಚ್ಯಾ ವಾಂಗ್ಡಾ ಮರಾನ್‍ಬಿ ಯೆಲೆ. ಹ್ಯಾ ಕಾರನಾಕ್ ಲಾಗುನ್ ಸಗ್ಳ್ಯಾ ಬಾಶಾಂಚ್ಯಾ ಲೊಕಾತ್ನಿ ಮರಾನ್ ಫರ್ಗಟ್ಲೆ, ಕಶ್ಯಾಕ್ ಮಟ್ಲ್ಯಾರ್, ಹರಿ ಎಕ್ಲ್ಯಾನಿ ಪಾಪ್ ಕರಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:12
20 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು