Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:13 - ಕನ್ನಡ ಸಮಕಾಲಿಕ ಅನುವಾದ

13 ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಧರ್ಮಶಾಸ್ತ್ರ ಉಂಟಾಗುವದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು; ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖಾಯ್ದೊ ದಿವ್ಚ್ಯಾ ಅದ್ದಿಕ್ನಾಚ್ ಹ್ಯಾ ಜಗಾತ್ ಪಾಪಾ ಹೊತ್ತೊ; ಖರೆ ಪಾಪಾಂಚೊ ಲೆಕ್ಕ್ ಧರುನ್ ಹೊಯ್‍ನಶಿ, ಕಶ್ಯಾಕ್ ಮಟ್ಲ್ಯಾರ್, ಖಾಯ್ದೊ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:13
16 ತಿಳಿವುಗಳ ಹೋಲಿಕೆ  

ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.


ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.


ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.


ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.


ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.


ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.


ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.


ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಈ ಪ್ರಕಾರ ಲೋಟನ ಇಬ್ಬರು ಪುತ್ರಿಯರು ತಮ್ಮ ತಂದೆಯಿಂದ ಗರ್ಭಿಣಿಯರಾದರು.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು