ರೋಮಾಪುರದವರಿಗೆ 5:16 - ಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವರ ಉಚಿತಾರ್ಥವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಫಲ ಬಂದಂತೆ ಈ ವರವು ಬರಲಿಲ್ಲ; ಹೇಗಂದರೆ ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ನಿರ್ಣಯವು ಉಂಟಾಯಿತು, ಆದರೆ ದೇವರ ಕೃಪಾದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ಅವರನ್ನು ನೀತಿವಂತರೆಂದು ನಿರ್ಣಯಿಸುವಂಥದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಆ ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ದೆವಾಚ್ಯಾ ದೆನ್ಗಿಚ್ಯಾ ಅನಿ ಎಕ್ ಮಾನ್ಸಾಚ್ಯಾ ಪಾಪಾಚ್ಯಾ ಮದ್ದಿ ಫರಕ್ ಹಾಯ್. ಎಕ್ಲ್ಯಾಚ್ಯಾ ಪಾಪಾಚ್ಯಾ ವೈನಾ ಚುಕಿದಾರ್ ಮನ್ತಲೊ ನಿರ್‍ನಯ್ ಯೆಲೊ; ಖರೆ ಸುಮಾರ್ ಪಾಪಾಂಚ್ಯಾ ಮಾನಾ ಫುಕೊಟ್ ಗಾವಾಲ್ಲ್ಯಾ ಕುರ್ಪೆಚ್ಯಾ ದೆನ್ಗಿ ವೈನಾ ಚುಕಿದಾರ್ ನ್ಹಯ್ ಮನ್ತಲೊ ನಿರ್‍ನಯ್ ಯೆಲೊ. ಅಧ್ಯಾಯವನ್ನು ನೋಡಿ |