Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:17 - ಕನ್ನಡ ಸಮಕಾಲಿಕ ಅನುವಾದ

17 ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಕ್ ಮಾನ್ಸಾಕ್ ಲಾಗುನ್ ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಮರ್‍ನಾನ್ ಅಪ್ನಾಚೊ ಅದಿಕಾರ್ ಚಾಲ್ವುಕ್ ಚಾಲು ಕರ್‍ಲ್ಯಾನ್ ತೆ ಖರೆ ಹಾಯ್. ಖರೆ ಎಕ್ಲ್ಯಾನ್ ಜೆಜು ಕ್ರಿಸ್ತಾನ್ ಕರಲ್ಲ್ಯಾ ಕಾಮಾ ವೈನಾ ಪಡಲ್ಲೊ ಪ್ರಭಾವ್ ಕವ್ಡೊ ಮೊಟೊ! ದೆವಾಚಿ ಮಾಪುಕ್ ಹೊಯ್ನಾ ತವ್ಡಿ ಮೊಟಿ ಕುರ್ಪಾ ಘೆಟಲ್ಲ್ಯಾ ಸಗ್ಳ್ಯಾ ಜಾನಾಕ್ನಿ ಫುಕೊಟ್ ತೆನಿ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ ಅನಿ ತೆನಿ ಕ್ರಿಸ್ತಾಚ್ಯಾ ಜಿವಾನಿ ಭರುನ್ ಅದಿಕಾರ್ ಚಾಲ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:17
26 ತಿಳಿವುಗಳ ಹೋಲಿಕೆ  

ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.


ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.


ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.


ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?


ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು