Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:19 - ಕನ್ನಡ ಸಮಕಾಲಿಕ ಅನುವಾದ

19 ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶೆ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಪಾಪಿ ಮನುನ್ ಹೊಲೆ. ತಸೆಚ್ ಅನಿ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಖರೆ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:19
10 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.


ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ ತಮ್ಮನ್ನು ತಾವೇ ತಗ್ಗಿಸಿಕೊಂಡು ಮರಣವನ್ನು ಎಂದರೆ ಶಿಲುಬೆಯ ಮರಣವನ್ನೂ ಹೊಂದುವಷ್ಟು ವಿಧೇಯರಾದರು.


ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು