Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:2 - ಕನ್ನಡ ಸಮಕಾಲಿಕ ಅನುವಾದ

2 ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅತ್ತಾ ಅಮಿ ಅಸಲ್ಲ್ಯಾ ದೆವಾಚ್ಯಾ ಕುರ್ಪೆಚ್ಯಾ ಅನ್ಭೊಗಾತ್ ವಿಶ್ವಾಸಾ ವೈನಾ ತೆನಿ ಅಮ್ಕಾ ಘೆವ್ನ್ ಯೆಲ್ಯಾನಾಯ್. ತೆಚೆಸಾಟ್ನಿ ದೆವಾಚಿ ಮಹಿಮಾ ವಾಟುನ್ ಘೆತಲ್ಯಾ ಹ್ಯಾ ಬರೊಸ್ಯಾತ್ ಅಮಿ ಘಮಂಡಿನ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:2
43 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು