Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ,ಅಮಿ ಪಾಪಿ ಹೊತ್ತಾಂವ್ ತನ್ನಾ ಕ್ರಿಸ್ತ್ ಅಮ್ಚ್ಯಾಸಾಟ್ನಿ ಮರ್ಲೊ ಅಶೆ ದೆವಾನ್ ತೊ ಅಮ್ಚೊ ಕವ್ಡೊ ಪ್ರೆಮ್ ಕರ್‍ತಾ ಮನುನ್ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:8
19 ತಿಳಿವುಗಳ ಹೋಲಿಕೆ  

ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು