Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:19 - ಕನ್ನಡ ಸಮಕಾಲಿಕ ಅನುವಾದ

19 ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮ್ಚ್ಯಾ ಸ್ವಾಭಾವಿಕ್ ರಿತಿಚ್ಯಾ ಕಮಿಪಾನಾಕ್ ಲಾಗುನ್ ತುಮ್ಕಾಚ್ ಬುರ್ಶ್ಯಾ ಉದ್ದೆಸಾಂಚ್ಯಾ ಸಾಟ್ನಿ, ಪೊಜ್ಡೆಪಾನಾಕ್ ಅನಿ ಬುರ್ಶೆಪಾನಾಕ್ ಗುಲಾಮ್ ಕರುನ್ ಒಪ್ಸುನ್ ದಿಲ್ಲ್ಯಾಶಿ. ತಸೆಚ್ ಅತ್ತಾ ತುಮಿ ತುಮ್ಕಾಚ್ ಸಗ್ಳ್ಯಾ ರಿತಿನ್ ಪವಿತ್ರ್ ಹೊತ್ತ್ಯಾ ಉದ್ದೆಸಾಂಚ್ಯಾ ಸಾಟ್ನಿ ಖರ್ಯಾ ಪಾನಾಚ್ಯಾ ವಾಟೆನ್ ಚಲುಕ್ ಗುಲಾಮಾ ಸರ್ಕೆ ಒಪ್ಸುನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:19
19 ತಿಳಿವುಗಳ ಹೋಲಿಕೆ  

ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.


ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


“ಒಬ್ಬ ಗಂಡಸಿನ ತಲೆಯ ಕೂದಲು ಉದುರಿ ಹೋದರೆ, ಅವನು ಬೋಳು ತಲೆಯವನು. ಆದರೂ ಅವನು ಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು