Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:3 - ಕನ್ನಡ ಸಮಕಾಲಿಕ ಅನುವಾದ

3 ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕ್ರಿಸ್ತ ಯೇಸುವಿನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಪಾಲುಗಾರರಾಗುವದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ ತುಮ್ಕಾ ಖರೆಚ್ ಗೊತ್ತ್ ರ್‍ಹಾಂವ್ದಿತ್ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವ್‍ಸಾಟ್ನಿ ಮನುನ್ ಅಮಿ ಬಾಲ್ತಿಮ್ ಘೆಟ್ಲ್ಯಾಂವ್ ತನ್ನಾ ತೆಚ್ಯಾ ಮರ್ನಾತ್‍ಬಿ ಅಮಿ ವಾಟೊ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:3
24 ತಿಳಿವುಗಳ ಹೋಲಿಕೆ  

ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.


ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ.


ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.


ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?


ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?


ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.


ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು