Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:4 - ಕನ್ನಡ ಸಮಕಾಲಿಕ ಅನುವಾದ

4 ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಹೊವ್ನ್ ಅಮ್ಚ್ಯಾ ಬಾಲ್ತಿಮಾ ವೈನಾ ಅಮಿ ತೆಚ್ಯಾ ಮರ್‍ನಾತ್ ವಾಟೊ ಘೆಟ್ಲ್ಯಾಂವ್ ಅನಿ ಅಮ್ಕಾ ತೆಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲಿ, ಅಶೆ ಜೆ ಕಶೆ ಕ್ರಿಸ್ತಾಕ್ ಬಾಬಾಚ್ಯಾ ಮಹಿಮೆಚ್ಯಾ ಬಳಾನ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ, ತಸೆಚ್ ಅಮಿಬಿ ಝಿತ್ತೆ ರ್‍ಹಾವ್ನ್ ಎಕ್ ನ್ಹವ್ಯಾ ಜಿವನಾತ್ ಚಲುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:4
33 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.


ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.


ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?


ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ದೇವರು ತಮ್ಮ ಶಕ್ತಿಯಿಂದ ನಮಗೆ ಕರ್ತ ಆಗಿರುವ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು ಮತ್ತು ನಮ್ಮನ್ನೂ ಎಬ್ಬಿಸುವರು.


ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.


ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.


ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ.


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.


ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು