Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:6 - ಕನ್ನಡ ಸಮಕಾಲಿಕ ಅನುವಾದ

6 ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಮ್ಕಾ ಗೊತ್ತ್ ಅಸಲ್ಲ್ಯಾ ಸರ್ಕೆ ಅಮ್ಚ್ಯಾ ಜುನ್ನ್ಯಾ ಸ್ವಬಾವಾಕ್ ಕ್ರಿಸ್ತಾಚ್ಯಾ ವಾಂಗ್ಡಾ ಕುರ್ಸಾ ವರ್‍ತಿ ಮಾರುನ್ ಮರುಕ್ ಸೊಡುನ್ ಹೊಲಾ, ಅಶೆ ಪಾಪಾಚೊ ನಾಸ್ ಹೊವ್ಚೊ ಅನಿ ಅಮಿ ಪಾಪಾಚಿ ಗುಲಾಮಾ ಹೊವ್ನ್ ರ್‍ಹಾವ್ಚೆ ನ್ಹಯ್ ಮನುನ್ ಅಶೆ ಘಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:6
18 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ.


ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.


ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.


ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.


ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು