Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:1 - ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರದ ನೇಮನಿಯಮಗಳಿಗೆ ಒಳಪಟ್ಟಿರುತ್ತಾನೆ. ಧರ್ಮಶಾಸ್ತ್ರವನ್ನು ಅರಿತಿರುವ ನೀವು ಇದನ್ನು ಗ್ರಹಿಸಿಕೊಳ್ಳಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರಿಗೆ ನಾನು ಹೇಳುವದೇನಂದರೆ - ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ಅವನ ಮೇಲೆ ಧರ್ಮಶಾಸ್ತ್ರದ ಅಧಿಕಾರವು ನಡೆಯುತ್ತದೆಂಬದು ನಿಮಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನೀವೆಲ್ಲರು ಮೋಶೆಯ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರವು ಆ ವ್ಯಕ್ತಿಯನ್ನು ಆಳುತ್ತದೆ ಎಂಬುದು ನಿಮಗೆ ತಿಳಿದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಪ್ರಿತಿಚ್ಯಾನು, ಮಿಯಾ ಸಾಂಗ್ತಲ್ಯಾ ವಿಶಯಾತ್ ತುಮ್ಕಾ ಖರೆಚ್ ಸಮಾ ಕಳ್ತಾ; ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಸಗ್ಳ್ಯಾಕ್ನಿ ಖಾಯ್ದ್ಯಾಚ್ಯಾ ವಿಶಯಾತ್ ಗೊತ್ತ್ ಹಾಯ್. ಖಾಯ್ದೊ ಲೊಕಾ ಝಿತ್ತಿ ರ್‍ಹಾಯ್ ಪತರ್ ಎವ್ಡೆಚ್ ತೆಂಚೆ ವರ್‍ತಿ ಅಪ್ನಾಚೊ ರಾಜ್ ಚಾಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:1
12 ತಿಳಿವುಗಳ ಹೋಲಿಕೆ  

ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.


ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?


ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.


ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?


ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


“ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು