Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:10 - ಕನ್ನಡ ಸಮಕಾಲಿಕ ಅನುವಾದ

10 ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜೀವಿಸುವದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಪಾಪದ ನಿಮಿತ್ತ ಆತ್ಮಿಕವಾಗಿ ಸತ್ತುಹೋದೆನು. ಜೀವವನ್ನು ತರಬೇಕಾಗಿದ್ದ ಆಜ್ಞೆಯೇ ನನಗೆ ಮರಣವನ್ನು ತಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಮಿಯಾ ಮರ್ಲೊ ಜಿವ್ ದಿವ್ಕ್ ಮನುನ್ ಹೊತ್ತ್ಯಾ ಖಾಯ್ದ್ಯಾನ್ ಮಾಜ್ಯಾ ವಿಶಯಾತ್ ಮರಾನ್ ಘೆವ್ನ್ ಯೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:10
10 ತಿಳಿವುಗಳ ಹೋಲಿಕೆ  

ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.


ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.


ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು