Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:11 - ಕನ್ನಡ ಸಮಕಾಲಿಕ ಅನುವಾದ

11 ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಅದರಿಂದಲೇ ನನ್ನನ್ನು ಕೊಂದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲಹೊಂದಿ ನನ್ನನ್ನು ವಂಚಿಸಿ ಆ ಆಜ್ಞೆಯ ಮೂಲಕವೇ ನನ್ನನ್ನು ಕೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾಪಾಕ್ ಹ್ಯೊಚ್ ಎಕ್ ಅವ್ಕಾಸ್ ಗಾವ್ಲೊ, ಅನಿ ಉಪಾದೆಸಾಕ್ ಲಾಗುನ್ ತೆನಿ ಮಾಕಾ ಮಳ್ಳ್ ಕರ್‍ಲ್ಯಾನ್ ಅನಿ ಮಾಕಾ ಜಿವಾನಿ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:11
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.


ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು