Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ. ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪನಿಯಮಕ್ಕೆ ನನ್ನನ್ನು ಕೈದಿಯನ್ನಾಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಎಕ್ ದುಸ್ರೊಚ್ ಖಾಯ್ದೊ ಮಾಜ್ಯಾ ಆಂಗಾತ್ ಮಿಯಾ ಬಗ್ತಾ. ತೊ ಖಾಯ್ದೊ ಮಾಜ್ಯಾ ಮನಾಕ್ ಸಮಾ ದಿಸ್ತಲ್ಯಾ ಖಾಯ್ದ್ಯಾ ವಾಂಗ್ಡಾ ಝಗಡ್ತಾ. ತೊ ಖಾಯ್ದ್ಯೊ ಮಾಕಾ ಮಾಜ್ಯಾ ಆಂಗಾತ್ ಅಸಲ್ಲ್ಯಾ ಪಾಪಾಚ್ಯಾ ಖಾಯ್ದ್ಯಾತ್ ಲಪ್ಟುನ್ ಭಾಂದುನ್ ಘಾಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:23
16 ತಿಳಿವುಗಳ ಹೋಲಿಕೆ  

ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ.


ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.


ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.


ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು