ರೋಮಾಪುರದವರಿಗೆ 7:3 - ಕನ್ನಡ ಸಮಕಾಲಿಕ ಅನುವಾದ3 ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪತಿ ಬದುಕಿರುವಾಗಲೇ ಸತಿಯು ಇನ್ನೊಬ್ಬನೊಡನೆ ಸಂಬಂಧ ಬೆಳೆಸಿದರೆ ಆಕೆ ವ್ಯಭಿಚಾರಿಣಿ ಎನಿಸಿಕೊಳ್ಳುತ್ತಾಳೆ. ಪತಿಯು ಸತ್ತುಹೋದರೆ ಆಕೆ ವಿವಾಹಬಂಧನದಿಂದ ಮುಕ್ತಳು. ಅಂಥವಳು ಇನ್ನೊಬ್ಬನನ್ನು ಮದುವೆ ಆದರೂ ವ್ಯಭಿಚಾರಿಣಿ ಎನಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಅವನ ಹಂಗು ತಪ್ಪಿದ್ದರಿಂದ ಆಕೆ ಮತ್ತೊಬ್ಬ ಗಂಡನನ್ನು ಮಾಡಿಕೊಂಡರೂ ವ್ಯಭಿಚಾರಿಣಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅಶೆ ರಾತಾನಾ, ತಿಚೊ ಘೊವ್ ಝಿತ್ತೊ ರ್‍ಹಾತಾನಾಚ್ ತಿ ಅನಿ ಎಕ್ಲ್ಯಾ ಘೊಮನ್ಸಾಚ್ಯಾ ವಾಂಗ್ಡಾ ರ್‍ಹಾಲಿ ತರ್, ತಿಕಾ ಎಕ್ ವ್ಯೆಭಿಚಾರ್ ಕರ್‍ತಲಿ ಮನುನ್ ಬಲ್ವುನ್ ಹೊತಾ; ಖರೆ ತಿಚೊ ಘೊವ್ ಮರ್ಲೊ ತರ್, ತೆನಿ ಅನಿ ಎಕ್ಲ್ಯಾಕ್ ಲಗಿನ್ ಕರುನ್ ಘೆಟ್ಲಿನ್ ತರ್ ತಿ ವ್ಯೆಬಿಚಾರ್ ಕರ್ಲ್ಯಾ ಸರ್ಕೆ ಹೊಯ್ನಾ ಕಶ್ಯಾಕ್ ಮಟ್ಲ್ಯಾರ್ ತೆನಿ ಕರಲ್ಲೆ ಖಾಯ್ದ್ಯಾ ಪರ್‍ಕಾರ್ ಹಾಯ್. ಅಧ್ಯಾಯವನ್ನು ನೋಡಿ |