Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:7 - ಕನ್ನಡ ಸಮಕಾಲಿಕ ಅನುವಾದ

7 ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,” ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ, ಆಶಿಸಬಾರದೆಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯುತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಹೊಲ್ಯಾರ್, ಅಮಿ ಖಾಯ್ದೊಚ್ ಪಾಪಾನಿ ಭರಲ್ಲೊ ಹಾಯ್ ಮನುಕ್ ಹೊತಾ ಕಾಯ್? ಕನ್ನಾಚ್ ನಾ! ಹ್ಯಾ ಖಾಯ್ದ್ಯಾನ್ ಮಾಕಾ ಪಾಪ್ ಮಟ್ಲ್ಯಾರ್ ಕಾಯ್ ಮನುನ್ ದಾಕ್ವುನ್ ದಿಲ್ಯಾನ್. ಜರ್ ತರ್ ಖಾಯ್ದ್ಯಾತ್, “ದುಸ್ರ್ಯಾಂಕ್ನಿ ಜೆ ಕಾಯ್ ಸಮಂದ್ ಪಡಲ್ಲೆ ಹಾಯ್ ತೆಚಿ ಅಶಾ ಕರುನಕೊ”, ಮನುನ್ ಸಾಂಗಲ್ಲೆ ರ್‍ಹಾಯ್‍ನಸಿ ಹೊತ್ತೆ, ತರ್ ಆಸ್ಲ್ಯಾ ಆಶೆಚ್ಯಾ ವಿಶಯಾತ್ ಮಾಕಾ ಗೊತ್ತುಚ್ ರ್‍ಹಾಯ್‍ನಸಿ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:7
30 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.


ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ನಿನ್ನ ನೆರೆಯವನ ಮನೆಯನ್ನೂ, ಅವನ ಹೊಲವನ್ನೂ, ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.


ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.


ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.


ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.


ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!


ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?


ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ.


ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು