ರೋಮಾಪುರದವರಿಗೆ 8:11 - ಕನ್ನಡ ಸಮಕಾಲಿಕ ಅನುವಾದ11 ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜುಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲೊ ದೆವಾಚೊ ಆತ್ಮೊ ತುಮ್ಚ್ಯಾ ಭುತ್ತುರ್ ರ್‍ಹಾತಾ ಹೊಯ್ ಜಾಲ್ಯಾರ್, ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ಟಲ್ಲೊ ಹ್ಯೊ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರುನ್ ಹೊತ್ತ್ಯಾ ತ್ಯಾ ಆತ್ಮ್ಯಾಚ್ಯಾ ಹಾಜರ್‍ಪಾನಾಚ್ಯಾ ವೈನಾ ತುಮ್ಚ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾಕ್ನಿಬಿ ತೊ ಜಿವ್ ದಿತಾ. ಅಧ್ಯಾಯವನ್ನು ನೋಡಿ |