Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:13 - ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶ್ಯಾಕ್ ಮಟ್ಲ್ಯಾರ್, ತುಮಿ ತುಮ್ಚ್ಯಾ ಮಾನುಸ್‍ಪಾನಾಚ್ಯಾ ಸ್ವಬಾವಾಚ್ಯಾ ಸರ್ಕೆ ಚಲ್ಲ್ಯಾಸಿ ತರ್ ಕಶ್ಯಾಕ್ , ತುಮಿ ಮರ್ತ್ಯಾಶಿ; ಖರೆ ಪವಿತ್ರ್ ಆತ್ಮ್ಯಾಚ್ಯಾ ವೈನಾ ತುಮಿ ತುಮ್ಚ್ಯಾ ಪಾಪಾಚ್ಯಾ ಕಾಮಾಕ್ನಿ ಮರುಕ್ ಸೊಡ್ಲ್ಯಾಶಿ ತರ್, ತುಮಿ ಝಿತ್ತೆ ರ್‍ಹಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:13
20 ತಿಳಿವುಗಳ ಹೋಲಿಕೆ  

ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.


ಅದನ್ನು ಬಿಟ್ಟುಕೊಡಲು ಇಷ್ಟಪಡದೆ, ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು