Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:23 - ಕನ್ನಡ ಸಮಕಾಲಿಕ ಅನುವಾದ

23 ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಸಗ್ಳಿ ರಚ್ನಾ ಎವ್ಡಿಚ್ ಉಸ್ಕಾರುನ್ಗೆತ್ ನಾ, ಪವಿತ್ರ್ ಅತ್ಮೊಚ್ ದೆವಾಚೆ ಪಯ್ಲಿಚಿ ದೆನ್ಗಿ ಮನುನ್ ಘೆಟಲ್ಲೆ ಅಮಿಬಿ ಅಮ್ಚ್ಯಾ ಸಗ್ಳ್ಯಾ ಆಂಗಾಕ್ ಗುಲಾಮ್‍ಪಾನಾತ್ನಾ ಸುಟ್ಕಾ ಗಾವುನ್ ದೆವಾಚಿ ಪೊರಾ ಮನುನ್ ಘೆತಲೊ ಭಾಗ್ ಕನ್ನಾ ಗಾವ್ತಾ ಮನುನ್ ರಾಕುನ್ಗೆತ್ ಹಾಂವ್, ಅನಿ ಹೆಚ್ಯಾಸಾಟ್ನಿ ಅಮ್ಚ್ಯಾ ಭುತ್ತುರುಚ್ ಉಸ್ಕಾರುನ್ಗೆತ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:23
26 ತಿಳಿವುಗಳ ಹೋಲಿಕೆ  

ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ನಾನು ಎಂಥಾ ದುರವಸ್ಥೆಯುಳ್ಳ ಮನುಷ್ಯನು! ನನ್ನನ್ನು ಈ ಮರಣಕರವಾದ ದೇಹದಿಂದ ಯಾರು ಬಿಡಿಸಬಲ್ಲರು?


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಈ ಸಂಗತಿಗಳು ಸಂಭವಿಸಲು ತೊಡಗುವಾಗ, ತಲೆಯೆತ್ತಿ ನಿಲ್ಲಿರಿ. ಏಕೆಂದರೆ ನಿಮ್ಮ ವಿಮೋಚನೆಯು ಸಮೀಪಿಸಿತು,” ಎಂದರು.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.


ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.


ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು