ರೋಮಾಪುರದವರಿಗೆ 8:27 - ಕನ್ನಡ ಸಮಕಾಲಿಕ ಅನುವಾದ27 ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅನಿ ಅಮ್ಚ್ಯಾ ಮನಾನಿತ್ಲೊ ಘುಟ್ಟ್ ಗೊತ್ತ್ ಹೊತ್ತ್ಯಾ ದೆವಾಕ್ ಆತ್ಮ್ಯಾಚಿ ಆಶಾ ಕಾಯ್ ಮನುನ್ ಗೊತ್ತ್ ಹಾಯ್; ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಮರ್ಜಿ ಸರ್ಕೆ ರಾವ್ನ್, ದೆವಾಚ್ಯಾ ಖಾಸಿ ಲೊಕಾಂಚ್ಯಾ ಸಾಟ್ನಿಚ್ ತೊ ಮಾಗುನ್‍ಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.