Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:28 - ಕನ್ನಡ ಸಮಕಾಲಿಕ ಅನುವಾದ

28 ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಪ್ನಾಚೊ ಪ್ರೆಮ್ ಕರ್‍ತಲ್ಯಾಕ್ನಿ ಮಟ್ಲ್ಯಾರ್, ಜೆ ಕೊನಾಕ್ ಅಪ್ನಾಚ್ಯಾ ಉದ್ದೆಸಾ ಸಾಟ್ನಿ ಬಲ್ವುಲ್ಯಾನಾಯ್ ತೆಂಕಾ ದೆವ್ ಸಗ್ಳೆ ಬರೆಚ್ ಕರ್‍ತಾ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:28
53 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”


ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.


ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ.


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು