Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:4 - ಕನ್ನಡ ಸಮಕಾಲಿಕ ಅನುವಾದ

4 ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಶೆ ಮಾನ್ಸಾಚ್ಯಾ ಸ್ವಬಾವಾಚ್ಯಾ ಸರ್ಕೆ ಅಮಿ ಚಲಿನಸ್ತಾನಾ ಪವಿತ್ರ್ ಆತ್ಮ್ಯಾಚ್ಯಾ ಪರ್‍ಕಾರ್ ಚಲ್ತಲ್ಯಾ ಅಮ್ಚ್ಯಾ ಭುತ್ತುರ್ ಖಾಯ್ದ್ಯಾಚ್ಯಾ ಖರ್ಯ್ಯಾ ವಾಟೆನ್ ಚಲ್ತಲಿ ಹಿ ಗೊಸ್ಟ್ ಪುರಾ ಹೊವ್‍ಸಾಟ್ನಿ ದೆವಾನ್ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:4
13 ತಿಳಿವುಗಳ ಹೋಲಿಕೆ  

ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.


ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ?


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.


ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.


ನಾವು ಈ ಲೋಕದಲ್ಲಿ ಜೀವಿಸುವವರಾದರೂ, ನಾವು ಲೋಕದವರಂತೆ ಹೋರಾಟ ಮಾಡುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು