Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:5 - ಕನ್ನಡ ಸಮಕಾಲಿಕ ಅನುವಾದ

5 ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನ್ಸಾಚ್ಯಾ ಸ್ವಬಾವಾಕ್ ಖಾಲ್ತಿ ಹೊವ್ನ್ ಚಲ್ತಲಿ ಲೊಕಾ ಮಾನ್ಸಾಚೊ ಸ್ವಬಾವ್ ಕಾಯ್ ಸಾಂಗ್ತಾ ತೆ ಕರ್‍ತ್ಯಾತ್, ಖರೆ ಪವಿತ್ರ್ ಆತ್ಮ್ಯಾಚ್ಯಾ ಪರ್‍ಕಾರ್ ಚಲ್ತಲಿ ಲೊಕಾ ಪವಿತ್ರ್ ಆತ್ಮೊ ಕಶೆ ಚಲುಚೆ ಮನುನ್ ಸಾಂಗ್ತಾ ತಸೆ ಚಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:5
14 ತಿಳಿವುಗಳ ಹೋಲಿಕೆ  

ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ಆದರೆ ಯೇಸು ತಿರುಗಿ ತಮ್ಮ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದು ಹೇಳಿದರು.


ನಾವು ಈ ಲೋಕದಲ್ಲಿ ಜೀವಿಸುವವರಾದರೂ, ನಾವು ಲೋಕದವರಂತೆ ಹೋರಾಟ ಮಾಡುವವರಲ್ಲ.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು.


ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು