Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ರಾತಾನಾ, ದೆವ್ ಅಪ್ನಾಕ್ ಪಾಜೆ ತೆಂಚೆ ವರ್‍ತಿ ದಯಾ ದಾಕ್ವುತಾ, ಅನಿ ಅಪ್ನಾಕ್ ಮನಾಕ್ ಯೆತಾ ತೆಂಕಾ ಕಠೊರ್ ಮನಾಚಿ ಹೊಯ್ ಸರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:18
24 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.


ಯೆಹೋವ ದೇವರು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತನ್ನು ಕೇಳಲಿಲ್ಲ.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ಕಳುಹಿಸದೆ ಹೋದನು.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಅವರನ್ನು ಕಳುಹಿಸಲಾರದೆ ಹೋದನು.


ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು