Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:24 - ಕನ್ನಡ ಸಮಕಾಲಿಕ ಅನುವಾದ

24 ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಶ್ಯಾಕ್ ಮಟ್ಲ್ಯಾರ್ ಖಾಲಿ ಜುದೆವಾನಿತ್ಲಿ ಎವ್ಡಿಚ್ ನ್ಹಯ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿತ್ಲಿಬಿ ಅಮಿ ತೆನಿ ಬಲ್ವಲ್ಲಿ ಲೊಕಾ ಹೊವ್ನ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:24
20 ತಿಳಿವುಗಳ ಹೋಲಿಕೆ  

ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.


ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು