Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:27 - ಕನ್ನಡ ಸಮಕಾಲಿಕ ಅನುವಾದ

27 ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27-28 ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಇಸಾಯಿಯಾ ಇಸ್ರಾಯೆಲಾಚ್ಯಾ ವಿಶಯಾತ್ ಸೊಡ್ಸುನ್ ಸಾಂಗುನ್ಗೆತ್: “ಇಸ್ರಾಯೆಲಾಚಿ ಲೊಕಾ ಸಮುಂದರಾಚ್ಯಾ ದಂಡೆಕ್ ಹೊತ್ತ್ಯಾ ರೆತಿಚ್ಯಾ ದಾನಾಂಚ್ಯಾ ಎವ್ಡಿ ಲೈ ರ್‍ಹಾಲ್ಯಾರ್‍ಬಿ, ತ್ಯೆಂಚ್ಯಾತ್ಲೆ ಖಾಲಿ ಉಲ್ಲೆ ಜಾನಾ ಎವ್ಡೆಚ್ ಬಚಾವ್ ಹೊತ್ತ್ಯಾತ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:27
15 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ?


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು