Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:30 - ಕನ್ನಡ ಸಮಕಾಲಿಕ ಅನುವಾದ

30 ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹಾಗಾದರೆ ಏನು ಹೇಳೋಣ? ನೀತಿಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಸೆಮನುನ್ ಅಮಿ ಮನ್ತಾಂವ್ ದೆವಾಚ್ಯಾ ವಾಂಗ್ಡಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಥವ್ನ್ ಘೆವ್ನ್ ಖಟ್ಪಟ್ ಕರಿನಸಾಲ್ಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ವಿಶ್ವಾಸಾಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:30
28 ತಿಳಿವುಗಳ ಹೋಲಿಕೆ  

ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’


ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.


ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.”


ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.


ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.


ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು