Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:32 - ಕನ್ನಡ ಸಮಕಾಲಿಕ ಅನುವಾದ

32 ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಕಶ್ಯಾಕ್ ತೆ ಗಾವುಕ್ನಾ? ಕಶ್ಯಾಕ್ ಮಟ್ಲ್ಯಾರ್, ತೆನಿ ವಿಶ್ವಾಸಾಚ್ಯಾ ವರ್‍ತಿ ಹೊಂದುನ್ ನತ್ತ್ಯಾನಿ, ಅಪ್ನಿ ಕರ್‍ತಲ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ಹೊತ್ತ್ಯಾನಿ, ತೆಚೆಸಾಟ್ನಿ ತೆನಿ ಅಡ್ವ್ಯಾ ಗುಂಡ್ಯಾಕ್ ಆದ್ಳುನ್ ಪಡ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:32
15 ತಿಳಿವುಗಳ ಹೋಲಿಕೆ  

ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.


ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.


ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.


ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”


ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು