Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:5 - ಕನ್ನಡ ಸಮಕಾಲಿಕ ಅನುವಾದ

5 ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಂಕಾ ಹೆಬ್ರೆವ್ ಘರಾನ್ಯಾಚ್ಯಾ ಸಗ್ಳ್ಯಾಕ್ಡೆ ಗೊತ್ತ್ ಅಸಲ್ಲ್ಯಾ ಲೊಕಾಂಚ್ಯಾ ಪಿಳ್ಗಿತ್ನಾ ಧಾಡುನ್ ದಿಲ್ಲೆ ಹಾಯ್; ಅನಿ ಮಾನ್ಸಾಂಚ್ಯಾ ಜಲ್ಮಾಚ್ಯಾ ಪರ್‍ಕಾರ್ ಕ್ರಿಸ್ತ್ ಹೆಂಚ್ಯಾಚ್ ಪಿಳ್ಗಿಚೊ. ಸಗ್ಳ್ಯಾಚ್ಯಾ ವರ್‍ತಿ ರಾಜ್ ಚಾಲ್ವುತಲ್ಯಾ ದೆವಾಕ್ ಸದಾ ಸರ್ವತಾಕ್ ಹೊಗ್ಳಾಪ್ ಹೊಂವ್ದಿತ್! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:5
45 ತಿಳಿವುಗಳ ಹೋಲಿಕೆ  

ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.


ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.


ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.


ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.


ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು.


ಯೆಹೋಯಾದಾವನ ಮಗ ಬೆನಾಯನು ಅರಸನಿಗೆ ಉತ್ತರವಾಗಿ, “ಆಮೆನ್, ಅರಸನಾದ ನನ್ನ ಒಡೆಯನ ದೇವರಾದ ಯೆಹೋವ ದೇವರು ಹಾಗೆಯೇ ಹೇಳಲಿ.


ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.


ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ.


ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು