Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:1 - ಕನ್ನಡ ಸಮಕಾಲಿಕ ಅನುವಾದ

1 ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-2 ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪ್ರಿತಿಚ್ಯಾ ಥಿಯೊಫಿಲಸ್. ಲೈ ಲೊಕಾನಿ ಅಮ್ಚ್ಯಾ ಮದ್ದಿ ಹೊಲ್ಲಿ ಸಗ್ಳಿ ವಿಶಯಾ ಕವ್ಡೆ ಹೊತಾ ತವ್ಡೆ ಬರೆ ಕರುನ್ ಲಿವ್ಕ್ ಕಟ್ಪಟ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:1
13 ತಿಳಿವುಗಳ ಹೋಲಿಕೆ  

ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.


ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.


ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು