ಲೂಕ 1:15 - ಕನ್ನಡ ಸಮಕಾಲಿಕ ಅನುವಾದ15 ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ದೆವಾಚ್ಯಾ ನದ್ರೆತ್ ತೊ ಮೊಟೊ ಮಾನುಸ್ ಹೊತಾ, ಅನಿ ತೊ ವಾಯ್ನ್ ಹೊಂವ್ದಿ, ನಿಶಾ ಹೊತಲೆ ಕಾಯ್ಬಿ ಹೊಂವ್ದಿ ಫಿ ನಾ. ತೊ ಜಲ್ಮುಚ್ಯಾಕಿ ಅದ್ದಿತ್ನಾಚ್ ತೊ ಪವಿತ್ರ್ ಆತ್ಮ್ಯಾನ್ ಭರಲ್ಲೊ ರ್‍ಹಾತಾ. ಅಧ್ಯಾಯವನ್ನು ನೋಡಿ |