ಲೂಕ 1:17 - ಕನ್ನಡ ಸಮಕಾಲಿಕ ಅನುವಾದ17 ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಹಟಹಿಡಿದವರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ ಸಿದ್ಧವಾದ ಜನವನ್ನು ಕರ್ತನಿಗೆ ಒದಗಿಸುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೊ ಧನ್ಯಾಚ್ಯಾ ಫಿಡೆ-ಫಿಡೆ ಜಾತಾ.ಎಲಿಯಾ ಪ್ರವಾದ್ಯಾಚೆ ಗುನ್ ಅನಿ ಬಳ್ ತೆಕಾ ರ್‍ಹಾತಾ. ಬಾಬಾಕ್ನಿ ಅನಿ ಪೊರಾಕ್ನಿ ತೊ ಅನಿಪರ್‍ತುನ್ ಎಕ್ ಕರ್‍ತಾ; ತೊ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾಕ್ನಿ ದೆವಾಚ್ಯಾ ವಾಟೆನ್ ಚಲಿ ಸರ್ಕೆ ಕರ್‍ತಾ; ದೆವಾಚ್ಯಾ ಲೊಕಾಕ್ನಿ ದೆವಾಸಾಟ್ನಿ ತಯಾರ್ ಕರ್‍ತಾ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.