ಲೂಕ 1:20 - ಕನ್ನಡ ಸಮಕಾಲಿಕ ಅನುವಾದ20 ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸಮಾ ಎಳಾಕ್ ಖರೆ ಹೊತಲ್ಯಾ, ಮಿಯಾ ಸಾಂಗಲ್ಲ್ಯಾ ಖಬ್ರೆರ್ ತಿಯಾ ವಿಶ್ವಾಸ್ ಕರುಕ್ನೆ, ಹೆಚೆಸಾಟ್ನಿ ಮಿಯಾ ಸಾಂಗಲ್ಲಿ ಗೊಸ್ಟ್ ಖರಿ ಹೊಯ್ ಪತರ್ ತುಕಾ ಬೊಲುಕ್ ಹೊಯ್ನಾ; ತಿಯಾ ಮುಕ್ಕೊ ಹೊವ್ನ್ ರ್‍ಹಾತೆ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |