Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:22 - ಕನ್ನಡ ಸಮಕಾಲಿಕ ಅನುವಾದ

22 ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನವಾಗಿರಬೇಕು ಎಂದು ತಿಳುಕೊಂಡರು. ಅವನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಕರಿಯಾ ದೆವಾಚ್ಯಾ ಗುಡಿತ್ನಾ ಭಾಯ್ರ್ ಯೆಲ್ಲ್ಯಾ ತನ್ನಾ ತೆಕಾ ಲೊಕಾಂಚ್ಯಾಕ್ಡೆ ಬೊಲುಕ್ ಹೊವುಕ್ನಾ, ಹಾತಾನಿ ಸೊನ್ನಿ ಕರುನ್ ತೆನಿ ದಾಕ್ವುಲ್ಯಾನ್ ತೆಕಾ ಬೊಲುಕುಚ್ ಹೊವ್ಕ್ ನಾ.ತನ್ನಾ ದೆವಾಚ್ಯಾ ಗುಡಿತ್ ತೆನಿ ದರ್ಶನ್ ಬಗಟ್ಲ್ಯಾನ್ ಮನುನ್ ಲೊಕಾಕ್ನಿ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:22
8 ತಿಳಿವುಗಳ ಹೋಲಿಕೆ  

ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು.


ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:


ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.


ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು.


ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ.


ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.


ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು