Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:33 - ಕನ್ನಡ ಸಮಕಾಲಿಕ ಅನುವಾದ

33 ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅನಿ ತೊ ಜಾಕೊಬಾಚ್ಯಾ ಘರಾನ್ಯಾಚ್ಯಾ ಲೊಕಾಂಚೊ ರಾಜಾ ಹೊತಾ; ತೆಚೊ ರಾಜ್ ಕನ್ನಾಚ್ ಸರಿನಾ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:33
28 ತಿಳಿವುಗಳ ಹೋಲಿಕೆ  

“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.


“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.


ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.


‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’ ”


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು