Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:36 - ಕನ್ನಡ ಸಮಕಾಲಿಕ ಅನುವಾದ

36 ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡುಮಗುವದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಇದೇ ಆರನೆಯ ತಿಂಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಿಯಾ ಯಾದ್ ಥವ್ನ್ ಘೆ, ಪೊರಾ ಹೊಯ್‍ನ್ಯಾತ್ ಮನುನ್ ಸಾಂಗಲ್ಲಿ ತುಮ್ಚಿ ಸಮಂದಿನ್ ಎಲಿಜಾಬೆತ್ ಮ್ಹಾತಾರಿ ಹೊಲ್ಯಾರ್ಬಿ, ಅತ್ತಾ ಸಾ ಮ್ಹೈಯ್ನ್ಯಾಚಿ ಗರ್‍ವಾರ್‍ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:36
10 ತಿಳಿವುಗಳ ಹೋಲಿಕೆ  

ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.


ಸಾರಯಳು ಬಂಜೆಯಾದದ್ದರಿಂದ ಆಕೆಗೆ ಮಕ್ಕಳಿರಲಿಲ್ಲ.


ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು.


ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು.


ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.


ಆದರೆ, ಆ ಸ್ತ್ರೀಯು ಗರ್ಭಧರಿಸಿ, ಎಲೀಷನು ಹೇಳಿದ ಪ್ರಕಾರ ಮುಂದಿನ ವರ್ಷದ ಅದೇ ಸಮಯದಲ್ಲಿ ಮಗನನ್ನು ಹೆತ್ತಳು.


ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.


ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು