Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:52 - ಕನ್ನಡ ಸಮಕಾಲಿಕ ಅನುವಾದ

52 ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, ದೀನರನ್ನು ಮೇಲಕ್ಕೆ ಎತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಪ್ರಭುಗಳನ್ನು ಸಿಂಹಾಸನಗಳಿಂದ ದೊಬ್ಬಿ ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ ದೀನರನ್ನು ಉನ್ನತಿಗೇರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತೆನಿ ಮೊಟ್ಯಾ-ಮೊಟ್ಯಾ ರಾಜಾಕ್ನಿ ತೆಂಚ್ಯಾ ಕುರ್ಚಿ ವೈನಾ ಖಾಲ್ತಿ ಹಾನ್ಲ್ಯಾನ್, ಅನಿ ಎಗ್ದಮ್ ಕಿಳ್ ಹೊತ್ತ್ಯಾಕ್ನಿ ವರ್‍ತಿ ಉಕಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:52
14 ತಿಳಿವುಗಳ ಹೋಲಿಕೆ  

ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”


ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.


“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.


“ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು