Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:71 - ಕನ್ನಡ ಸಮಕಾಲಿಕ ಅನುವಾದ

71 ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

71 ‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

71-73 ಆತನು ನಮ್ಮ ಪಿತೃಗಳಿಗೆ ದಯೆಯನ್ನು ತೋರಿಸುವವನಾಗಿಯೂ ನಮ್ಮ ಮೂಲ ಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಸಿಕೊಳ್ಳುವವನಾಗಿಯೂ ಇದ್ದು ನಮ್ಮ ವೈರಿಗಳಿಂದಲೂ ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

71 ಅಮ್ಚ್ಯಾ ದುಸ್ಮಾನಾಂಚ್ಯಾ ಹಾತಿತ್ನಾ, ಅಮ್ಕಾ ತೆನಿ ರಾಕನ್ ಕರ್‍ಲ್ಯಾನ್ ಅನಿ ಅಮ್ಚೊ ದ್ವೆಸ್ ಕರ್‍ತಲ್ಯಾಂಚ್ಯಾ ಅದಿಕಾರಾತ್ನಾ ತೆನಿ ಅಮ್ಕಾ ಸೊಡ್ವುತಾ ಮನುನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:71
19 ತಿಳಿವುಗಳ ಹೋಲಿಕೆ  

ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.


ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”


ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.


“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು