Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:72 - ಕನ್ನಡ ಸಮಕಾಲಿಕ ಅನುವಾದ

72-73 ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

72-73 ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

72 ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

72 ಅಮ್ಚ್ಯಾ ವಾಡ್ ವಡ್ಲಾಂಚ್ಯಾ ವರ್‍ತಿ ದಯಾ ದಾಕ್ವುತಾ, ಅನಿ ಅದ್ದಿ ಕರಲ್ಲ್ಯಾ ಪವಿತ್ರ್ ಕರಾರಾಚಿ ಯಾದ್ ಥವ್ನ್ ಘೆತಾ, ಮನುನ್ ಸಾಂಗಟಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:72
21 ತಿಳಿವುಗಳ ಹೋಲಿಕೆ  

ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು.


ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು