Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:75 - ಕನ್ನಡ ಸಮಕಾಲಿಕ ಅನುವಾದ

75 ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

75 ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

75 ಅಶೆ ಅಮಿ ಎಕ್ ಎಳಾರ್, ಅಮ್ಚ್ಯಾ ಸಗ್ಳೆ ಜಿವನ್‍ಬರ್ ತೆಚ್ಯಾ ಇದ್ರಾಕ್, ಪವಿತ್ರ್ ಅನಿ ಬರಿ ಕಾಮಾ ಕರ್‍ತಲಿ ಲೊಕಾ ಹೊವ್ನ್ ರಾವ್‍ಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:75
19 ತಿಳಿವುಗಳ ಹೋಲಿಕೆ  

ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.


ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು